NobleBlocks

Research indexJournal article

ಅಬಡಕರರವರ ಸಮಜಕ ಚತನಗಳ

ಕೆ.

Zenodo (CERN European Organization for Nuclear Research)2 Feb 2025Open access

NobleIDark:/48914/w1/20260521/0007F608DOI10.5281/zenodo.14788783

Free to read at the publisher

You can read the abstract here, or the full text at the publisher.

Read at the publisher

Abstract

ಡಾ.ಬಿ.ಆರ್. ಅಂಬೇಡ್ಕರ್ ಅವರು ಭಾರತದ ಸಂವಿಧಾನ ಶಿಲ್ಪಿ ಎಂದು ಕರೆಸಿಕೊಂಡ ಮಹಾನ್ ವ್ಯಕ್ತಿ. ಇವರು ಸಾಮಾಜಿಕ ಸಮಾನತೆ, ಅಸ್ಪೃಶ್ಯತೆ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು. ಇವರು ದೇಶಕ್ಕಾಗಿ ಮಾಡಿದ ಹೋರಾಟಗಳು ಎಂತಹ ದುರ್ಬಲ ವ್ಯಕ್ತಿಗಳನ್ನೂ ಸಹ ಎಚ್ಚರಿಸುತ್ತದೆ. ಇವರ ಕೊಡುಗೆಯನ್ನು ಭಾರತೀಯ ಜನತೆ ಎಂದಿಗೂ ಮರೆಯುವುದಿಲ್ಲ. ಸಂವಿಧಾನ ರಚನೆಗೆ ಮಾತ್ರವಲ್ಲದೇ ಅವರ ಸೇವೆ ಜನತೆಯನ್ನು ಜಾಗೃತರಾಗಿ ಮಾಡುವ ಸಾಧನವಾಗಿದೆ ಎನ್ನಬಹುದು. ಅಂಬೇಡ್ಕರ್ ಅವರು ವೈಚಾರಿಕತೆಯ ನೆಲೆಯಲ್ಲಿ ಈ ದೇಶವನ್ನು ಮುಂದೆ ತೆಗೆದುಕೊಂಡು ಹೋಗಬೇಕೆಂಬ ಮಹದಾಶಯವನ್ನು ಹೊಂದಿರುವ ಅಪರೂಪ ವ್ಯಕ್ತಿ. ಈ ಹಿನ್ನಲೆಯಲ್ಲಿಯೇ ಅವರು “ಈ ದೇಶದಲ್ಲಿ ಗುಡಿ-ಗೋಪುರಗಳಿಗಿಂತ ಶಾಲೆಗಳು ತೆರೆದರೆ, ಆ ದೇಶ ಉದ್ದಾರವಾಗುತ್ತದೆ” ಎಂಬ ನಿಲುವನ್ನು ತಾಳಿದ್ದರು. ಅಂಬೇಡ್ಕರ್ ಅವರ ಆಲೋಚನೆಗಳು, ಜೀವನ ಮೌಲ್ಯಗಳು ಸಾಹಿತ್ಯ ಕ್ಷೇತ್ರದಲ್ಲೂ ವಸ್ತುವಾಗುತ್ತಿದೆ ಎಂದರೆ; ಆ ವ್ಯಕ್ತಿಯ ಅನನ್ಯತೆಯ ಬಗ್ಗೆ ಅವಲೋಕನ ಮಾಡಬೇಕಾದದ್ದೇ ಸರಿ. ಅವರ ನಡೆ, ನುಡಿಗಳ ಜಾಡನ್ನಿಡಿದರೆ ನಾವು ಎಂತಹ ಅಸಮಾನತೆಯನ್ನಾಗಲೀ, ಕಷ್ಟಕರವಾದ ಯಾವುದೇ ಕೆಲಸವಾಗಲೀ ಅಂತಹವುಗಳಿಂದ ನಾವು ಸುಲಭವಾಗಿ ತಪ್ಪಿಸಿಕೊಳ್ಳಬಹುದೆಂಬ ಅರಿವು ಮನದಟ್ಟಾಗುತ್ತದೆ.

Discussion

Topics

More

Suggest a correction or report